2 ಪೂರ್ವಕಾಲ ವೃತ್ತಾಂತ 20:3 - ಪರಿಶುದ್ದ ಬೈಬಲ್3 ಯೆಹೋಷಾಫಾಟನು ಭಯಭೀತನಾಗಿ ಯೆಹೋವನನ್ನು ವಿಚಾರಿಸಲು ನಿರ್ಧರಿಸಿದನು. ಯೆಹೂದದ ಎಲ್ಲಾ ಜನರು ಉಪವಾಸ ಮಾಡಬೇಕೆಂದು ಆಜ್ಞೆ ಹೊರಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು. ಅಧ್ಯಾಯವನ್ನು ನೋಡಿ |
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.