Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:30 - ಪರಿಶುದ್ದ ಬೈಬಲ್‌

30 ಆದ್ದರಿಂದ ಯೆಹೋಷಾಫಾಟನ ರಾಜ್ಯದಲ್ಲಿ ಸಮಾಧಾನ ನೆಲೆಸಿತ್ತು. ಅವನ ಸುತ್ತಮುತ್ತಲೂ ಯೆಹೋವನು ಶಾಂತಿಯನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೀಗೆ ದೇವಾನುಗ್ರಹದಿಂದ ಸುತ್ತಣ ವೈರಿಗಳ ಭಯತಪ್ಪಿ ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೀಗೆ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು. ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:30
12 ತಿಳಿವುಗಳ ಹೋಲಿಕೆ  

ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.


“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು.


ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.


ಆಗ ನೀನು ಮಲಗಿ ವಿಶ್ರಮಿಸಿಕೊಳ್ಳುವೆ; ಯಾರೂ ನಿನಗೆ ಭಯ ಹುಟ್ಟಿಸುವುದಿಲ್ಲ. ಅನೇಕರು ನಿನ್ನ ಸಹಾಯಕ್ಕಾಗಿಯೇ ಕೇಳಿಕೊಳ್ಳುವರು.


ಆಗ ನೀನು ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ.


ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು