Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:37 - ಪರಿಶುದ್ದ ಬೈಬಲ್‌

37 ಆಗ ಎಲಿಯೇಜರನು ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಷ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶಮಾಡುವನು” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದುಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆಗ ಮಾರೇಷಾ ಊರಿನ ದೋದಾವಾಹುವಿನ ಮಗ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ, “ನೀನು ಅಹಜ್ಯನೊಡನೆ ಒಪ್ಪಂದಮಾಡಿಕೊಂಡಿದ್ದರಿಂದ ಸರ್ವೇಶ್ವರ ನಿನ್ನ ಕೆಲಸವನ್ನು ಹಾಳುಮಾಡುವರು,” ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದುದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ - ನೀನು ಅಹಜ್ಯನೊಡನೆ ಒಡಂಬಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳುಮಾಡುವನು ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದದ್ದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಮಾರೇಷಾ ಊರಿನ ದೋದವಾಹುವಿನ ಮಗನಾದ ಎಲೀಯೆಜೆರನು ಯೆಹೋಷಾಫಾಟನಿಗೆ ವಿರೋಧವಾಗಿ ಪ್ರವಾದಿಸಿ, “ನೀನು ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡಿದ್ದರಿಂದ, ಯೆಹೋವ ದೇವರು ನೀನು ಮಾಡಿದವುಗಳನ್ನು ನಾಶಮಾಡುವರು,” ಎಂದು ಹೇಳಿದನು. ಅದರಂತೆಯೇ, ಆ ಹಡಗುಗಳು ತಾರ್ಷೀಷಿಗೆ ಹೋಗದೆ ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:37
12 ತಿಳಿವುಗಳ ಹೋಲಿಕೆ  

ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡಿಸಿದರು. ಮೂರು ವರ್ಷಕ್ಕೊಮ್ಮೆ ಹಡಗುಗಳು ತಾರ್ಷೀಷಿನಿಂದ ಹಿಂದಿರುಗುತ್ತಿದ್ದವು. ಅವು ಚಿನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.”


ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.


ಯೆಹೋಷಾಫಾಟನು ಅಹಜ್ಯನೊಂದಿಗೆ ಸೇರಿ ಹಡಗುಗಳನ್ನು ತಯಾರಿಸಿ ತಾರ್ಷೀಷಿಗೆ ಕಳುಹಿಸಿದನು. ಅವರು ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿದರು.


ಯೆಹೋಷಾಫಾಟನು ಸತ್ತನು. ಅವನನ್ನು ಅವನ ಪೂರ್ವಿಕರೊಂದಿಗೆ ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಯೆಹೋರಾಮನು ಪಟ್ಟಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು