Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:6 - ಪರಿಶುದ್ದ ಬೈಬಲ್‌

6 “ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:6
31 ತಿಳಿವುಗಳ ಹೋಲಿಕೆ  

“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.


ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.


“ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ.


ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.


“ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.


ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


“ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.


ಯೆಹೋಷಾಫಾಟನು ದೇವಾಲಯದ ಹೊಸ ಅಂಗಳದಲ್ಲಿ ಕೂಡಿಬಂದ ಜನರೆದುರು ಎದ್ದುನಿಂತು,


ನೀನು ನಿನ್ನನ್ನು ಬಲಿಷ್ಠನನ್ನಾಗಿ ಮಾಡಿಕೊಂಡಿದ್ದರೂ ನಿನ್ನ ಸೋಲು ಮತ್ತು ನಿನ್ನ ಜಯ ದೇವರ ಕೈಯಲ್ಲಿವೆ” ಎಂದು ಹೇಳಿದನು.


ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.


ಸರ್ವಶಕ್ತನಾದ ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು.


ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.


ಆಗ ಯಾಜಕರು ನಿಂತುಕೊಂಡು ಸೇವೆಯನ್ನು ಮಾಡಲಾಗಲಿಲ್ಲ. ಯಾಕೆಂದರೆ ದೇವರ ಮಹಿಮೆಯು ದೇವಾಲಯವನ್ನು ತುಂಬಿಕೊಂಡಿತ್ತು.


“ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ.


ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು