Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:7 - ಪರಿಶುದ್ದ ಬೈಬಲ್‌

7 ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:7
23 ತಿಳಿವುಗಳ ಹೋಲಿಕೆ  

ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.


ಯೆಹೋವನು ಹೀಗೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ.


ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕೆಂದರೆ ನೀನು ಒಳ್ಳೆಯವನಾಗಿರುವೆ.


ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಆ ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.


ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”


ಅಬ್ರಹಾಮನ ಸಂತತಿಯವರು ಈ ದೇಶದಲ್ಲಿ ವಾಸವಾಗಿ ನಿನ್ನ ಹೆಸರನ್ನು ಸ್ಥಾಪಿಸಲು ನಿನಗೊಂದು ದೇವಾಲಯವನ್ನು ಕಟ್ಟಿದರು.


ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.


ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶವನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.


“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.


“ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು