Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:10 - ಪರಿಶುದ್ದ ಬೈಬಲ್‌

10 ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದುಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:10
17 ತಿಳಿವುಗಳ ಹೋಲಿಕೆ  

“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


“ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು.


ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೋ. ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.


ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,


ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.


ಯೆಹೋರಾಮನ ಆಳ್ವಿಕೆಯ ಸಮಯದಲ್ಲಿ ಎದೋಮ್ ಯೆಹೂದದ ಹಿಡಿತದಿಂದ ಬಿಡಿಸಿಕೊಂಡಿತು. ಎದೋಮಿನ ಪ್ರಜೆಗಳು ತಮ್ಮ ರಾಜನನ್ನು ತಾವೇ ಆರಿಸಿಕೊಂಡರು.


ಇದನ್ನರಿತ ಯೆಹೋರಾಮನು ತನ್ನ ರಥಬಲದೊಡನೆ ಎದೋಮಿಗೆ ಹೋದನು. ಅಲ್ಲಿ ಎದೋಮ್ಯರ ಸೈನ್ಯ ಇವರಿಗೆ ಮುತ್ತಿಗೆ ಹಾಕಿತು. ಆದರೆ ರಾತ್ರಿ ಸಮಯದಲ್ಲಿಯೇ ಯೆಹೋರಾಮನು ಅವರನ್ನು ಸೋಲಿಸಿದನು.


ಯೆಹೋರಾಮನು ಯೆಹೂದ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ತಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ಆಗ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಮಕ್ಕೇದದಿಂದ ಪ್ರಯಾಣ ಮಾಡಿ ಲಿಬ್ನಕ್ಕೆ ಹೋಗಿ ಆ ಪಟ್ಟಣದ ಮೇಲೆ ಧಾಳಿಮಾಡಿದರು.


ಆದರೆ ನೀವು ನನ್ನನ್ನು ತ್ಯಜಿಸಿದಿರಿ. ನೀವು ಬೇರೆ ದೇವರುಗಳನ್ನು ಪೂಜಿಸಿದಿರಿ. ಆದ್ದರಿಂದ ನಾನು ಮತ್ತೆ ನಿಮ್ಮನ್ನು ರಕ್ಷಿಸುವುದಿಲ್ಲ.


ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು