Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:11 - ಪರಿಶುದ್ದ ಬೈಬಲ್‌

11 ಯೆಹೋರಾಮನು ಯೆಹೂದ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ತಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಅವನು ಯೆಹೂದದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಯೆರೂಸಲೇವಿುನವರನ್ನು ದೇವದ್ರೋಹಮಾಡುವಂತೆ ಪ್ರೇರಿಸಿ ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:11
28 ತಿಳಿವುಗಳ ಹೋಲಿಕೆ  

ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.


ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.


ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು.


“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.


ಯೋರಾಮನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು. ಯೇಹುವು, “ನಿನ್ನ ತಾಯಿಯಾದ ಈಜೆಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವ ತನಕ ಶುಭವಿರುವುದಿಲ್ಲ” ಎಂದು ಉತ್ತರಿಸಿದನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.


ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದುಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು.


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”


ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.


“ಆಕೆಯ ತಂಗಿಯಾದ ಒಹೊಲೀಬಳು ಆಕೆಗಾದದ್ದನ್ನೆಲ್ಲಾ ನೋಡಿದ್ದಳು. ಆದರೆ ಒಹೊಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು