2 ಪೂರ್ವಕಾಲ ವೃತ್ತಾಂತ 21:14 - ಪರಿಶುದ್ದ ಬೈಬಲ್14 ಆದ್ದರಿಂದ ಯೆಹೋವನು ನಿನ್ನ ಜನರನ್ನು ಭಯಂಕರವಾದ ರೋಗದಿಂದ ದಂಡಿಸುವನು. ಆತನು ನಿನ್ನನ್ನೂ ನಿನ್ನ ಹೆಂಡತಿಮಕ್ಕಳನ್ನೂ ಆಸ್ತಿಪಾಸ್ತಿಯನ್ನೂ ಶಿಕ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದುದರಿಂದ ಸರ್ವೇಶ್ವರ ನಿನ್ನ ಪ್ರಜೆಯನ್ನೂ ಮಡದಿಮಕ್ಕಳನ್ನೂ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದದರಿಂದ ಯೆಹೋವನು ನಿನ್ನ ಪ್ರಜೆಯನ್ನೂ ಹೆಂಡರುಮಕ್ಕಳನ್ನೂ ಸರ್ವಸ್ವವನ್ನೂ ಮಹಾಪತ್ತಿಗೆ ಗುರಿಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ, ನಿನ್ನ ಮಕ್ಕಳನ್ನೂ, ನಿನ್ನ ಹೆಂಡತಿಯರನ್ನೂ, ನಿನ್ನ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾರೆ. ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.