2 ಪೂರ್ವಕಾಲ ವೃತ್ತಾಂತ 21:19 - ಪರಿಶುದ್ದ ಬೈಬಲ್19 ಎರಡು ವರ್ಷಗಳ ನಂತರ ಆ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಬಹಳ ನೋವನ್ನು ಅನುಭವಿಸಿ ಸತ್ತನು. ಅವನು ಸತ್ತಾಗ ಅವನ ತಂದೆಗೆ ಧೂಪಹಾಕಿ ಗೌರವಿಸಿದಂತೆ ಯೆಹೋರಾಮನಿಗೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕಾಲಾಂತರದಲ್ಲಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಅದೇ ರೋಗದ ನಿಮಿತ್ತ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪೂರ್ವಿಕರಿಗೆ ಧೂಪಹಾಕಿದಂತೆ ಅವನ ಪ್ರಜೆಗಳು ಅವನಿಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕಾಲಾಂತರದಲ್ಲಿ ಅಂದರೆ ಸುಮಾರು ಎರಡು ವರುಷಗಳಾದ ಮೇಲೆ ಆ ರೋಗದಿಂದ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗೋಸ್ಕರ ಧೂಪಹಾಕಿದ ಪ್ರಕಾರ ಅವನಿಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ. ಅಧ್ಯಾಯವನ್ನು ನೋಡಿ |
ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ.