2 ಪೂರ್ವಕಾಲ ವೃತ್ತಾಂತ 21:2 - ಪರಿಶುದ್ದ ಬೈಬಲ್2 ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್ ಮತ್ತು ಶೆಫಟ್ಯ. ಇವರೆಲ್ಲಾ ಯೆಹೂದದ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರು ಯೆಹೂದ್ಯರ ಅರಸ ಯೆಹೋಷಾಫಾಟನ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು. ಅಧ್ಯಾಯವನ್ನು ನೋಡಿ |
ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.