20 ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಎಂಟು ವರ್ಷ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನು ಸತ್ತಾಗ ಅವನಿಗೋಸ್ಕರ ಯಾರೂ ದುಃಖಪಡಲಿಲ್ಲ. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ರಾಜರ ಸಮಾಧಿ ಸ್ಥಳದಲ್ಲಿ ಅವನನ್ನು ಹೂಳಿಡಲಿಲ್ಲ.
20 ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
20 ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.
20 ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಅವನು ತೀರಿಹೋದಾಗ ಅವನನ್ನು ಯಾರೂ ಹಂಬಲಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.
20 ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.
ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?
ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.
ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.
ಉಜ್ಜೀಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ ಶವವನ್ನು ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೀಯನ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.