2 ಪೂರ್ವಕಾಲ ವೃತ್ತಾಂತ 21:3 - ಪರಿಶುದ್ದ ಬೈಬಲ್3 ಯೆಹೋಷಾಫಾಟನು ತನ್ನ ಮಕ್ಕಳಿಗೆ ಅನೇಕ ಬೆಳ್ಳಿಬಂಗಾರದ ಮತ್ತು ಬೆಲೆಬಾಳುವ ವಸ್ತುಗಳನ್ನು ಉಡುಗೊರೆಯಾಗಿ ಕೊಟ್ಟನು. ಮಾತ್ರವಲ್ಲದೆ ಕೋಟೆಯಿಂದ ಭದ್ರಪಡಿಸಲ್ಪಟ್ಟ ಪಟ್ಟಣಗಳನ್ನು ಕೊಟ್ಟನು. ಆದರೆ ಯೆಹೂದ ರಾಜ್ಯವನ್ನು ತನ್ನ ಚೊಚ್ಚಲ ಮಗನಾದ ಯೆಹೋರಾಮನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವರ ತಂದೆ ಇವರಿಗೆ ಜುದೇಯದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಲ್ಲದೆ, ಬೆಳ್ಳಿಬಂಗಾರ, ಅಮೂಲ್ಯ ವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ ಶ್ರೇಷ್ಠವಸ್ತು ಇತ್ಯಾದಿ ವಿಶೇಷದಾನಗಳನ್ನು ಕೊಟ್ಟನು; ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರ ತಂದೆ ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಯನ್ನೂ, ಬಂಗಾರವನ್ನೂ, ಬೆಲೆಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲ ಮಗನಾದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |