Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:7 - ಪರಿಶುದ್ದ ಬೈಬಲ್‌

7 ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:7
19 ತಿಳಿವುಗಳ ಹೋಲಿಕೆ  

ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.


ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”


ತನ್ನ ಸೇವಕನಾದ ದಾವೀದನ ಮನೆತನದಿಂದ ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.


ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.


ಆದರೆ ಅರಸನಾದ ಯೋರಾಮನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ಅಡಗಿಸಿಟ್ಟಳು. ಆಕೆಯು ಅವನನ್ನೂ ಅವನ ದಾದಿಯನ್ನೂ ಒಳಗಿನ ಕೋಣೆಯಲ್ಲಿ ಅಡಗಿಸಿಟ್ಟಳು. ಆಕೆಯು ಯಾಜಕನಾದ ಯೆಹೋಯಾದನ ಹೆಂಡತಿಯಾಗಿದ್ದಳು. ಆಕೆಯು ಸಹ ಅಹಜ್ಯನ ಸೋದರಿ. ಯೆಹೋವಾಷನು ಅತಲ್ಯಳಿಗೆ ಸಿಗದೆಹೋದುದರಿಂದ ಬದುಕಿಕೊಂಡನು.


ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.


ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.


ಯೆಹೋರಾಮನು ಸತ್ತುಹೋದನು. ಅವನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಯೆಹೋರಾಮನ ಮಗನಾದ ಅಹಜ್ಯನು ನೂತನ ರಾಜನಾದನು.


ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತತಿಯವರಿಗೆ ಮಾಡಿದ ವಾಗ್ದಾನದ ಪ್ರಕಾರ ಅರಸನಾಗತಕ್ಕವನು ಇವನೇ.


ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು