Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:1 - ಪರಿಶುದ್ದ ಬೈಬಲ್‌

1 ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೆರುಸಲೇಮಿನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯಮಗ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರೇಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಜುದೇಯದ ಅರಸ ಯೆಹೋರಾಮನ ಮಗ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೂಸಲೇವಿುನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ [ಯೆಹೋರಾಮನ] ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:1
12 ತಿಳಿವುಗಳ ಹೋಲಿಕೆ  

ಯೆಹೂದದ ಜನರು ಯೆಹೋವಾಹಾಜನನ್ನು ತಮ್ಮ ಹೊಸ ಅರಸನನ್ನಾಗಿ ಜೆರುಸಲೇಮಿನಲ್ಲಿ ಆರಿಸಿದರು. ಯೆಹೋವಾಹಾಜನು ಯೋಷೀಯನ ಮಗನು.


ಆದರೆ ಅರಸನಾದ ಅಮೋನನಿಗೆ ವಿರೋಧವಾಗಿ ಎದ್ದ ಸೇವಕರನ್ನೆಲ್ಲಾ ಯೆಹೂದದ ಜನರು ಸಂಹರಿಸಿದರು. ಅನಂತರ ಅಮೋನನ ಮಗನಾದ ಯೋಷೀಯನನ್ನು ತಮ್ಮ ಅರಸನನ್ನಾಗಿ ಆರಿಸಿದರು.


ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ.


ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತತಿಯವರಿಗೆ ಮಾಡಿದ ವಾಗ್ದಾನದ ಪ್ರಕಾರ ಅರಸನಾಗತಕ್ಕವನು ಇವನೇ.


ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ.


ಆಗ ಅವನಿಗೆ ಇಪ್ಪತ್ತೆರಡು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿ ಒಮ್ರಿಯ ಮಗಳಾದ ಅತಲ್ಯಳು.


ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.


ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದನು. ಅಹಾಬನ ಮಗನಾದ ಯೋರಾಮನು ಇಸ್ರೇಲಿನ ರಾಜನಾಗಿದ್ದ ಐದನೆಯ ವರ್ಷದಲ್ಲಿ ಯೆಹೋರಾಮನು ಆಳಲಾರಂಭಿಸಿದನು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು