Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:2 - ಪರಿಶುದ್ದ ಬೈಬಲ್‌

2 ಆಗ ಅವನಿಗೆ ಇಪ್ಪತ್ತೆರಡು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿ ಒಮ್ರಿಯ ಮಗಳಾದ ಅತಲ್ಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷ ಪ್ರಾಯ. ಇವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು; ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಪಟ್ಟಕ್ಕೆ ಬಂದಾಗ ನಾಲ್ವತ್ತೆರಡು ವರುಷದವನಾಗಿದ್ದನು; ಇವನು ಯೆರೂಸಲೇವಿುನಲ್ಲಿ ಒಂದು ವರುಷ ಆಳಿದನು; ಒವ್ರಿುಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಹಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯಳು, ಈಕೆಯು ಒಮ್ರಿಯ ಮೊಮ್ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:2
6 ತಿಳಿವುಗಳ ಹೋಲಿಕೆ  

ಅವನು ಇಸ್ರೇಲಿನ ರಾಜರುಗಳು ವರ್ತಿಸಿದ ರೀತಿಯಲ್ಲಿ ಜೀವಿಸಿದನು. ಅಹಾಬನ ಕುಟುಂಬದವರು ಹೇಗೆ ಜೀವಿಸಿದರೋ ಹಾಗೆಯೇ ಜೀವಿಸಿದನು. ಯಾಕೆಂದರೆ ಅವನು ಅಹಾಬನ ಮಗಳನ್ನು ಮದುವೆಯಾಗಿದ್ದನು. ಯೆಹೋರಾಮನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿ ಜೀವಿಸಿದನು.


ಅಹಜ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯ. ಅವಳು ಇಸ್ರೇಲಿನ ರಾಜನಾದ ಒಮ್ರಿಯ ಮಗಳು.


ಒಮ್ರಿಯು ಸತ್ತುಹೋದನು; ಅವನನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು, ಅವನ ನಂತರ ಅವನ ಮಗನಾದ ಅಹಾಬನು ಹೊಸ ರಾಜನಾದನು.


ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.


ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಕೃತ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು.


ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು