Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:3 - ಪರಿಶುದ್ದ ಬೈಬಲ್‌

3 ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಕೃತ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಹೆಜ್ಜೆ ಜಾಡಿನಲ್ಲೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತನ್ನ ತಾಯಿಯ ದುರ್ಬೋಧೆಯನ್ನು ಆಲೈಸಿ ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:3
16 ತಿಳಿವುಗಳ ಹೋಲಿಕೆ  

ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.


“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಜ್ಯನು ಮಾಡಿದನು. ಅಹಜ್ಯನು ಅಹಾಬನ ಕುಟುಂಬದ ಜನರಂತೆ ಜೀವಿಸಿದ್ದನು. ಅಹಜ್ಯನು ಅಹಾಬನ ಅಳಿಯನಾದ್ದರಿಂದ ಅವನು ಹೀಗೆ ಜೀವಿಸಿದನು.


ಆಗ ಅವನಿಗೆ ಇಪ್ಪತ್ತೆರಡು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿ ಒಮ್ರಿಯ ಮಗಳಾದ ಅತಲ್ಯಳು.


ಯೆಹೋವನ ದೃಷ್ಟಿಯಲ್ಲಿ ಅಹಜ್ಯನು ದುಷ್ಕೃತ್ಯಗಳನ್ನು ಮಾಡಿದನು. ಅಹಜ್ಯನ ತಂದೆಯು ಸತ್ತುಹೋದ ಬಳಿಕ ಅಹಾಬನ ಕುಟುಂಬದವರು ಅಹಜ್ಯನಿಗೆ ಕೆಟ್ಟ ಸಲಹೆಗಳನ್ನು ಕೊಟ್ಟರು. ಆ ಕೆಟ್ಟ ಸಲಹೆಗಳು ಅವನನ್ನು ಮರಣಕ್ಕೆ ನಡೆಸಿದವು.


ಅವನು ಇಸ್ರೇಲರ ಅರಸರಂತೆ ಕೆಟ್ಟದಾರಿಯಲ್ಲಿ ನಡೆದನು. ಅವನು ಎರಕದ ಬೊಂಬೆಗಳನ್ನು ಮಾಡಿಸಿ ಬಾಳ್ ದೇವರ ವಿಗ್ರಹಗಳನ್ನು ಪೂಜಿಸಿದನು.


ಗತಿಸಿದ ವರ್ಷಗಳಲ್ಲಿ ಅತಲ್ಯಳ ಮಕ್ಕಳು ದೇವಾಲಯದೊಳಗೆ ಬಲಾತ್ಕಾರದಿಂದ ನುಗ್ಗಿ ಅಲ್ಲಿದ್ದ ಪವಿತ್ರ ವಸ್ತುಗಳನ್ನು ತೆಗೆದು ಬಾಳ್ ದೇವರ ಪೂಜೆಗಾಗಿ ಉಪಯೋಗಿಸಿದ್ದರು. ಅತಲ್ಯಳು ಬಹಳ ದುಷ್ಟಳಾಗಿದ್ದಳು.


ಯೆಹೋಯಾದನು ಸತ್ತ ಬಳಿಕ ಯೆಹೂದದೇಶದ ಪ್ರಮುಖರು ಅರಸನಾದ ಯೆಹೋವಾಷನ ಬಳಿಗೆ ಬಂದು ನಮಸ್ಕರಿಸಿದರು. ಅರಸನು ಅವರ ಮಾತುಗಳನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು