Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:5 - ಪರಿಶುದ್ದ ಬೈಬಲ್‌

5 ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್‌ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾಮನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾಮನನ್ನು ಗಾಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪ್ರೇರಣೆಯಿಂದಲೇ ಇಸ್ರಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಸಿರಿಯಾದ ಅರಸ ಹಜಾಯೇಲನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಸಿರಿಯಾದವರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರ ಪ್ರೇರಣೆಯಿಂದ ಇಸ್ರಾಯೇಲ್ಯರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನು ಆ ಗಾಯಗಳನ್ನು ಮಾಯಿಸಿಕೊಳ್ಳುವದಕ್ಕಾಗಿ ಇಜ್ರೇಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:5
13 ತಿಳಿವುಗಳ ಹೋಲಿಕೆ  

ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


“ಬೇಲ್ಶಚ್ಚರನೇ, ಇವುಗಳೆಲ್ಲ ನಿನಗೆ ತಿಳಿದೇ ಇವೆ. ನೀನು ನೆಬೂಕದ್ನೆಚ್ಚರನ ಮಗ. ಆದರೂ ನೀನು ನಮ್ರತೆಯಿಂದ ವರ್ತಿಸಲಿಲ್ಲ.


ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ರಥಾಧಿಪತಿಗಳು ಯೆಹೋಷಾಫಾಟನನ್ನು ನೋಡಿದಾಗ ಅವನೇ ಅಹಾಬನೆಂದೆಣಿಸಿ ಅವನ ಮೇಲೆ ದಾಳಿ ನಡೆಸಿದರು. ಆದರೆ ಯೆಹೋಷಾಫಾಟನು ಗಟ್ಟಿಯಾಗಿ ಕೂಗಿಕೊಂಡನು. ಆಗ ಯೆಹೋವನು ಅವನಿಗೆ ಸಹಾಯಮಾಡಿ ರಥಾಧಿಪತಿಗಳು ಅವನಿಂದ ಬೇರೆ ಕಡೆಗೆ ತಿರುಗುವಂತೆ ಮಾಡಿದನು.


ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.


ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.


ಆ ಸಮಯದಲ್ಲಿ, ಅಹಾಬನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ರಾಜನು ಗಿಲ್ಯಾದಿನ ರಾಮೋತ್ ಪಟ್ಟಣವನ್ನು ನಮ್ಮಿಂದ ತೆಗೆದುಕೊಂಡದ್ದನ್ನು ಜ್ಞಾಪಿಸಿಕೊಳ್ಳಿರಿ? ರಾಮೋತನ್ನು ಹಿಂದಕ್ಕೆ ಪಡೆಯಲು ನಾವು ಏನನ್ನೂ ಮಾಡಲಿಲ್ಲವೇಕೆ? ಅದು ನಮ್ಮ ಪಟ್ಟಣ” ಎಂದು ಹೇಳಿದನು.


ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.


ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾಮನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾಮನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾಮನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.


ಅಹಾಬನ ಮಗನಾದ ಯೋರಾಮನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋಷಾಫಾಟನ ಹದಿನೆಂಟನೆಯ ವರ್ಷದ ಆಳ್ವಿಕೆಯಲ್ಲಿ ಯೋರಾಮನು ಯೆಹೂದದ ರಾಜನಾಗಿ ಆಳಲಾರಂಭಿಸಿದನು. ಯೋರಾಮನು ಹನ್ನೆರಡು ವರ್ಷ ಆಳಿದನು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು