Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:9 - ಪರಿಶುದ್ದ ಬೈಬಲ್‌

9 ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರಿಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದುತಂದು, ವಧಿಸಿದರು. “ಇವನು ಸರ್ವೇಶ್ವರನ ನೈಜಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ?” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳಲು ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ವಧಿಸಿ - ಇವನು ಯೆಹೋವನ ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಾಗಿರುತ್ತಾನಲ್ಲವೇ ಅಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:9
14 ತಿಳಿವುಗಳ ಹೋಲಿಕೆ  

ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು.


ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಎಂಟು ವರ್ಷ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನು ಸತ್ತಾಗ ಅವನಿಗೋಸ್ಕರ ಯಾರೂ ದುಃಖಪಡಲಿಲ್ಲ. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ರಾಜರ ಸಮಾಧಿ ಸ್ಥಳದಲ್ಲಿ ಅವನನ್ನು ಹೂಳಿಡಲಿಲ್ಲ.


ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ.


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನನ್ನು ಬಲಪಡಿಸಿಕೊಂಡನು. ನಂತರ ತನ್ನ ತಮ್ಮಂದಿರನ್ನೆಲ್ಲಾ ಖಡ್ಗದಿಂದ ಹತಿಸಿದನು. ಮಾತ್ರವಲ್ಲದೆ ಇಸ್ರೇಲಿನ ಕೆಲವು ಪ್ರಧಾನರನ್ನು ಕೊಲ್ಲಿಸಿದನು.


ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ಆ ಪ್ರವಾದಿಯು ಯೆಹೂದ ದೇಶದವನಾದ ದೇವಮನುಷ್ಯನಿಗೆ, “ಯೆಹೋವನು ಹೇಳುವುದೇನೆಂದರೆ, ನೀನು ಆತನಿಗೆ ವಿಧೇಯನಾಗಲಿಲ್ಲ. ಆತನ ಆಜ್ಞೆಯನ್ನು ನೀನು ಅನುಸರಿಸಲಿಲ್ಲ.


ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಆ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು.


ನೀವು ನನ್ನನ್ನು ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.


ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.


ಅಮೋನನ ಸೇವಕರು ಸಂಚುಮಾಡಿ ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು