Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:1 - ಪರಿಶುದ್ದ ಬೈಬಲ್‌

1 ಆರು ವರ್ಷದ ನಂತರ ಯೆಹೋಯಾದನು ತನ್ನ ಬಲವನ್ನು ಪ್ರದರ್ಶಿಸಿದನು. ಅವನು ಸೇನಾಪತಿಗಳೊಂದಿಗೆ ಒಪ್ಪಂದ ಮಾಡಿಕೊಂಡನು. ಅವರು ಯಾರೆಂದರೆ: ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ ಮತ್ತು ಜಿಕ್ರಿಯ ಮಗನಾದ ಎಲೀಷಾಫಾಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಳನೆಯ ವರುಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಡಂಬಡಿಕೆಯನ್ನು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:1
7 ತಿಳಿವುಗಳ ಹೋಲಿಕೆ  

“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.


ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು.


ಇಚ್ಹಾರನ ಗಂಡುಮಕ್ಕಳು: ಕೋರಹ, ನೆಫೆಗ್ ಮತ್ತು ಜಿಕ್ರಿ.


ಯೆಹೋವಾಷನು ಆರು ವರ್ಷಗಳ ಕಾಲ ಯಾಜಕರೊಂದಿಗೆ ದೇವಾಲಯದೊಳಗೆ ಯಾರಿಗೂ ತಿಳಿಯದಂತೆ ಇದ್ದನು. ಆ ದಿನಗಳಲ್ಲಿ ಅತಲ್ಯಳು ರಾಣಿಯಾಗಿ ದೇಶವನ್ನು ಆಳಿದಳು.


ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು