2 ಪೂರ್ವಕಾಲ ವೃತ್ತಾಂತ 23:13 - ಪರಿಶುದ್ದ ಬೈಬಲ್13 ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಲ್ಲಿ ಅರಸನು ಬಾಗಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನರ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು. ಅಧ್ಯಾಯವನ್ನು ನೋಡಿ |
ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.