2 ಪೂರ್ವಕಾಲ ವೃತ್ತಾಂತ 23:17 - ಪರಿಶುದ್ದ ಬೈಬಲ್17 ಆಗ ಜನರೆಲ್ಲರು ಬಾಳನ ಗುಡಿಯೊಳಗೆ ನುಗ್ಗಿ ಅದನ್ನು ಹಾಳು ಮಾಡಿದರು. ಅದರ ಯಜ್ಞವೇದಿಕೆಗಳನ್ನೂ ವಿಗ್ರಹಗಳನ್ನೂ ಪುಡಿಪುಡಿ ಮಾಡಿದರು. ಬಾಳನ ಅರ್ಚಕನಾದ ಮತ್ತಾನನನ್ನು ಬಾಳನ ವೇದಿಕೆಯ ಮುಂದೆಯೇ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತರುವಾಯ ಜನರೆಲ್ಲರೂ ಬಾಳ್‍ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಮುಂದೆಯೇ ಕೊಂದರು; ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗೂ ವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತರುವಾಯ ಜನರೆಲ್ಲರೂ ಬಾಳ್‍ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.