Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:9 - ಪರಿಶುದ್ದ ಬೈಬಲ್‌

9 ಯಾಜಕನಾದ ಯೆಹೋಯಾದನು ಅವರಿಗೆ ಬರ್ಜಿಯನ್ನೂ ದೊಡ್ಡ ಮತ್ತು ಚಿಕ್ಕ ಗುರಾಣಿಗಳನ್ನೂ ಕೊಟ್ಟನು. ಅವು ರಾಜನಾದ ದಾವೀದನಿಗೆ ಸೇರಿದವುಗಳಾಗಿದ್ದವು. ಅವು ದೇವಾಲಯದೊಳಗೆ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವಾಲಯದಲ್ಲಿಟ್ಟಿದ್ದ ದಾವೀದ ಅರಸನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ ಗುರಾಣಿ ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:9
5 ತಿಳಿವುಗಳ ಹೋಲಿಕೆ  

ಹದದೆಜೆರನ ಸೇವಕರಿಗೆ ಸೇರಿದ ಚಿನ್ನದ ಗುರಾಣಿಗಳನ್ನು ದಾವೀದನು ವಶಪಡಿಸಿಕೊಂಡನು. ದಾವೀದನು ಅವುಗಳನ್ನು ಜೆರುಸಲೇಮಿಗೆ ತಂದನು.


ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.


ರಾಜನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ದೊಡ್ಡ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ಏಳು ಕಿಲೋಗ್ರಾಂ ಬಂಗಾರವಿತ್ತು.


ಯಾಜಕನಾದ ಯೆಹೋಯಾದನು ಆಜ್ಞಾಪಿಸಿದಂತೆ ಲೇವಿಯರೂ ಯೆಹೂದದ ಜನರೂ ಮಾಡಿದರು. ಆದ್ದರಿಂದ ಪ್ರತಿಯೊಬ್ಬ ಸೇನಾಧಿಪತಿಯು ತನ್ನ ಕೈ ಕೆಳಗೆ ಸಬ್ಬತ್‌ದಿನದಲ್ಲಿ ಕೆಲಸಮಾಡಲು ಹೋಗುತ್ತಿದ್ದವರನ್ನು ಮತ್ತು ಸಬ್ಬತ್ ದಿನದ ಕೆಲಸ ಮುಗಿಸಿಕೊಂಡು ಬರುತ್ತಿದ್ದವರನ್ನು ಕೂಡಿಸಿಕೊಂಡನು.


ಸೇರಿಬಂದವರು ಎಲ್ಲೆಲ್ಲಿ ನಿಲ್ಲಬೇಕೆಂದು ಯೆಹೋಯಾದನು ಸೂಚಿಸಿದನು. ಪ್ರತಿಯೊಬ್ಬರ ಕೈಯಲ್ಲಿ ಆಯುಧಗಳಿದ್ದವು. ದೇವಾಲಯದ ಎಡಬಲಗಳಲ್ಲಿ ಜನರು ನಿಂತಿದ್ದರು. ಯಜ್ಞವೇದಿಕೆಯ ಬಳಿ, ದೇವಾಲಯದ ಬಳಿ ಮತ್ತು ಅರಸನ ಬಳಿಯಲ್ಲಿ ಅವರು ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು