Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:12 - ಪರಿಶುದ್ದ ಬೈಬಲ್‌

12 ಯೆಹೋಯಾದನು ಮತ್ತು ರಾಜನು ದೇವಾಲಯವನ್ನು ದುರಸ್ತಿ ಮಾಡುವವರ ಕೈಗೆ ಅದನ್ನು ಕೊಟ್ಟರು. ಅವರು ಮರದ ಕುಶಲಕರ್ಮಿಗಳನ್ನೂ ಬಡಗಿಗಳನ್ನೂ ದೇವಾಲಯವನ್ನು ಸರಿಪಡಿಸಲು ನೇಮಿಸಿದರು. ಅಲ್ಲದೆ ತಾಮ್ರಕಬ್ಬಿಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನೂ ಕೆಲಸಕ್ಕೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅರಸನೂ ಯೆಹೋಯಾದನೂ ಅದನ್ನು ಸರ್ವೇಶ್ವರನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಇವರು ಸರ್ವೇಶ್ವರನ ಆಲಯದ ದುರಸ್ತಿ ಕೆಲಸಕ್ಕಾಗಿ, ಶಿಲ್ಪಿಗಾರರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡಿಸುವವರಿಗೆ ಒಪ್ಪಿಸಿದರು. ಇವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:12
7 ತಿಳಿವುಗಳ ಹೋಲಿಕೆ  

ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು.


ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


ಲೇವಿಯರು ಅದನ್ನು ಅರಸನ ಅಧಿಕಾರಿಗಳ ಬಳಿಗೆ ತೆಗೆದುಕೊಂಡು ಹೋಗುತ್ತಿದ್ದರು; ರಾಜನ ಕಾರ್ಯದರ್ಶಿ ಮತ್ತು ಯಾಜಕರ ಮುಖಂಡನು ಬಂದು ಅದರಲ್ಲಿದ್ದ ಹಣವನ್ನು ತೆಗೆದುಕೊಂಡು ಮತ್ತೆ ಆ ಪೆಟ್ಟಿಗೆಯನ್ನು ಮುಂಚಿನ ಸ್ಥಳದಲ್ಲಿ ಇಡುತ್ತಿದ್ದರು. ಹೀಗೆ ಅವರು ಮಾಡುತ್ತಾ ಬಂದಕಾರಣ ಬಹಳ ಹಣ ಸಂಗ್ರಹಿಸಲ್ಪಟ್ಟಿತು.


ಕೆಲಸಗಳ ಮೇಲ್ವಿಚಾರಣೆ ಮಾಡುವವರು ನಂಬಿಗಸ್ತರಾಗಿದ್ದರು. ದೇವಾಲಯವನ್ನು ಸರಿಪಡಿಸುವ ಯೋಜನೆಯು ಪೂರ್ಣಗೊಂಡಿತು. ಅವರು ಅದನ್ನು ಮುಂಚೆ ಹೇಗಿತ್ತೋ ಹಾಗೆಯೇ ಮಾಡಿದರು; ಅಲ್ಲದೆ ಅದಕ್ಕಿಂತಲೂ ಹೆಚ್ಚು ಭದ್ರಪಡಿಸಿದರು.


ಯೆಹೋವಾಷನ ಮಕ್ಕಳ ಚರಿತ್ರೆ, ಅವನ ವಿರುದ್ಧವಾಗಿ ಹೇಳಿದ ಪ್ರವಾದನೆಗಳು, ಅವನು ದೇವಾಲಯವನ್ನು ಸರಿಪಡಿಸಿದ ವಿಷಯಗಳು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆಯಲ್ಪಟ್ಟಿದೆ. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ರಾಜನಾದನು.


ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜಲೇಖಕನೂ ಆಗಿದ್ದನು. ಯೆಹೂದವನ್ನು ಮತ್ತು ದೇವಾಲಯವನ್ನು ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿಕಾರ್ಯಕ್ಕೆ ಕೈ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು