2 ಪೂರ್ವಕಾಲ ವೃತ್ತಾಂತ 24:15 - ಪರಿಶುದ್ದ ಬೈಬಲ್15 ಯೆಹೋಯಾದನು ವೃದ್ಧನಾದನು. ಅವನು ದೀರ್ಘಕಾಲ ಬಾಳಿ ತೀರಿಹೋದನು. ಅವನು ಸಾಯುವಾಗ ಅವನಿಗೆ ನೂರ ಮೂವತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು. ಸಾಯುವಾಗ ಅವನಿಗೆ ನೂರಮೂವತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರುಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.