2 ಪೂರ್ವಕಾಲ ವೃತ್ತಾಂತ 24:17 - ಪರಿಶುದ್ದ ಬೈಬಲ್17 ಯೆಹೋಯಾದನು ಸತ್ತ ಬಳಿಕ ಯೆಹೂದದೇಶದ ಪ್ರಮುಖರು ಅರಸನಾದ ಯೆಹೋವಾಷನ ಬಳಿಗೆ ಬಂದು ನಮಸ್ಕರಿಸಿದರು. ಅರಸನು ಅವರ ಮಾತುಗಳನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋಯಾದನು ಮೃತನಾದ ಮೇಲೆ ಯೆಹೂದಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು. ಅಧ್ಯಾಯವನ್ನು ನೋಡಿ |
ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.