Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:24 - ಪರಿಶುದ್ದ ಬೈಬಲ್‌

24 ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟುಬಿಟ್ಟದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಾಮ್ಯರ ಸೈನ್ಯದಿಂದ ಬಂದು ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟುಬಿಟ್ಟದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಆತನು ಅರಾಮ್ಯರ ಕೈಯಲ್ಲಿ ಬೀಳುವಂತೆ ಮಾಡಿ ಯೆಹೋವಾಷನನ್ನು ಇವರ ಮುಖಾಂತರ ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:24
19 ತಿಳಿವುಗಳ ಹೋಲಿಕೆ  

ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಒಬ್ಬನು ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುವಾಗ ಓಡಿಹೋಗುವಂತೆ ಅವರು ಓಡಿಹೋಗುವರು. ಯಾರೂ ಅವರನ್ನು ಬೆನ್ನಟ್ಟದಿದ್ದಾಗಲೂ ಅವರು ಒಬ್ಬರ ಮೇಲೊಬ್ಬರು ಬೀಳುವರು. “ನೀವು ನಿಮ್ಮ ವೈರಿಗಳ ವಿರುದ್ಧವಾಗಿ ನಿಲ್ಲುವಷ್ಟು ಶಕ್ತಿಯುಳ್ಳವರಾಗಿರುವುದಿಲ್ಲ.


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.”


ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.


ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.


ಯೆಹೋವನು ಹೇಳುವುದೇನೆಂದರೆ, “ಭೂಲೋಕದಲ್ಲಿರುವದೆಲ್ಲವನ್ನು ನಾನು ನಾಶಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು