Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:25 - ಪರಿಶುದ್ದ ಬೈಬಲ್‌

25 ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವರು ಅವನನ್ನು ಬಿಟ್ಟುಹೋದಕೂಡಲೆ ಅವನ ಸೇವಕರು ಯಾಜಕನಾದ ಯೆಹೋಯಾದನ ಮಗನ ವಧೆಯ ನಿವಿುತ್ತ ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಕಠಿನ ರೋಗದಲ್ಲಿದ್ದ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:25
15 ತಿಳಿವುಗಳ ಹೋಲಿಕೆ  

ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಅವನ ದೇಹವನ್ನು ದಾವೀದ ನಗರದಲ್ಲಿ ಅರಸುಗಳ ಸಮಾಧಿಯ ಬಳಿಯಲ್ಲಿ ಸಮಾಧಿ ಮಾಡಿದರು. ಯಾಕೆಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು.


ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾಮನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾಮನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾಮನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.


ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು.


ಯೆಹೋವಾಷನನ್ನು ಕೊಲ್ಲಲು ಸಂಚುಮಾಡಿದ ಸೇವಕರು ಯಾರೆಂದರೆ: ಜಾಬಾದ್ ಮತ್ತು ಯೆಹೋಜಾಬಾದ್, ಜಾಬಾದನ ತಾಯಿಯ ಹೆಸರು ಶಿಮ್ಗಾತ್, ಈಕೆ ಅಮ್ಮೋನಿಯಳು. ಯೆಹೋಜಾಬಾದನ ತಾಯಿಯು ಶಿಮ್ರೀತ್ ಎಂಬಾಕೆ, ಈಕೆ ಮೋವಾಬ್ಯಳು.


ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.


ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.


ಅಮಚ್ಯನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡ ನಂತರ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.


ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು