2 ಪೂರ್ವಕಾಲ ವೃತ್ತಾಂತ 24:27 - ಪರಿಶುದ್ದ ಬೈಬಲ್27 ಯೆಹೋವಾಷನ ಮಕ್ಕಳ ಚರಿತ್ರೆ, ಅವನ ವಿರುದ್ಧವಾಗಿ ಹೇಳಿದ ಪ್ರವಾದನೆಗಳು, ಅವನು ದೇವಾಲಯವನ್ನು ಸರಿಪಡಿಸಿದ ವಿಷಯಗಳು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆಯಲ್ಪಟ್ಟಿದೆ. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ರಾಜನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನ ಮಕ್ಕಳ ವಿವರ, ಅವನಿಗೆ ವಿರುದ್ಧ ಹೇಳಲಾದ ಅನೇಕ ದೈವೋಕ್ತಿಗಳು ಹಾಗು ದೇವಾಲಯದ ದುರಸ್ತಿಯ ವೃತ್ತಾಂತ ಇವು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನ ಮಕ್ಕಳ ವಿವರವೂ ಅವನಿಗೆ ವಿರುದ್ಧವಾಗಿ ಹೇಳಲ್ಪಟ್ಟ ಅನೇಕ ದೈವೋಕ್ತಿಗಳೂ ದೇವಾಲಯದ ಜೀರ್ಣೋದ್ಧಾರವೃತ್ತಾಂತವೂ ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |
ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.