Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:5 - ಪರಿಶುದ್ದ ಬೈಬಲ್‌

5 ಅವನು ಯಾಜಕರನ್ನೂ ಲೇವಿಯರನ್ನೂ ಒಟ್ಟಾಗಿ ಕರೆದು, “ಯೆಹೂದ ದೇಶದ ಊರುಗಳಿಗೆ ಹೋಗಿ ಜನರು ಪ್ರತಿ ವರ್ಷ ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಸಂಗ್ರಹಿಸಿರಿ. ದೇವಾಲಯನ್ನು ಸರಿಪಡಿಸಲು ಆ ಹಣವನ್ನು ಉಪಯೋಗಿಸಿರಿ. ಇದನ್ನು ಬೇಗನೆ ಮಾಡಿರಿ” ಎಂದು ಹೇಳಿದನು. ಆದರೆ ಲೇವಿಯರು ಅವಸರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ, “ನೀವು ಜುದೇಯದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಸರ್ವೇಶ್ವರನ ಆಲಯದ ವಾರ್ಷಿಕ ದುರಸ್ತಿಯ ಖರ್ಚಿಗಾಗಿ ಎಲ್ಲ ಇಸ್ರಯೇಲರಿಂದ ಹಣ ಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ - ನೀವು ಯೆಹೂದದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಯೆಹೋವನ ಆಲಯವನ್ನು ವರುಷ ವರುಷ ಜೀರ್ಣೋದ್ಧಾರ ಮಾಡುವದಕ್ಕಾಗಿ ಎಲ್ಲಾ ಇಸ್ರಾಯೇಲ್ಯರಿಂದ ಹಣಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅವನು ಯಾಜಕರನ್ನೂ, ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆ, “ನೀವು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ ವರ್ಷ ವರ್ಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವುದಕ್ಕೆ ಸಮಸ್ತ ಇಸ್ರಾಯೇಲರಿಂದ ಹಣವನ್ನು ಕೂಡಿಸಿರಿ ಮತ್ತು ಕೆಲಸವನ್ನು ಶೀಘ್ರವಾಗಿ ನಡೆಸಿರಿ,” ಎಂದನು. ಆದರೂ ಲೇವಿಯರು ಅವಸರ ಮಾಡದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:5
4 ತಿಳಿವುಗಳ ಹೋಲಿಕೆ  

ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು.


ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್ ಮತ್ತು ಶೆಫಟ್ಯ. ಇವರೆಲ್ಲಾ ಯೆಹೂದದ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು