2 ಪೂರ್ವಕಾಲ ವೃತ್ತಾಂತ 25:10 - ಪರಿಶುದ್ದ ಬೈಬಲ್10 ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಅಮಚ್ಯನು ಎಫ್ರಯಿಮರಿಂದ ಬಂದ ಸೈನಿಕರನ್ನು ಬೇರೆಮಾಡಿ, ಅವರನ್ನು ಅವರ ನಾಡಿಗೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಕಡುಕೋಪಗೊಂಡು, ಬಲುಸಿಟ್ಟಿನಿಂದ ತಮ್ಮ ನಾಡಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಅಮಚ್ಯನು ಎಫ್ರಾಯೀಮ್ಯರಿಂದ ಬಂದ ಸೈನಿಕರನ್ನು ಬೇರೆ ಮಾಡಿ ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹುಕೋಪಗೊಂಡು ಬಲುಸಿಟ್ಟಿನಿಂದ ತಮ್ಮ ದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅಮಚ್ಯನು ಎಫ್ರಾಯೀಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವರನ್ನು ಕಳುಹಿಸಿಬಿಟ್ಟನು. ಆದಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪಗೊಂಡವರಾಗಿ ತಮ್ಮ ಮನೆಗೆ ತಿರುಗಿದರು. ಅಧ್ಯಾಯವನ್ನು ನೋಡಿ |
ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.
ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.