2 ಪೂರ್ವಕಾಲ ವೃತ್ತಾಂತ 25:13 - ಪರಿಶುದ್ದ ಬೈಬಲ್13 ಅದೇ ಸಮಯದಲ್ಲಿ, ಇಸ್ರೇಲರ ಸೈನ್ಯವು ಯೆಹೂದದ ಕೆಲವು ಪಟ್ಟಣಗಳ ಮೇಲೆ ಧಾಳಿಮಾಡಿತು. ಅವರು ಬೇತ್ಹೋರೋನಿನಿಂದ ಹಿಡಿದು ಸಮಾರ್ಯದವರೆಗೆ ಇರುವ ಪಟ್ಟಣಗಳ ಮೇಲೆ ಧಾಳಿ ಮಾಡಿದರು. ಅವರು ಮೂರು ಸಾವಿರ ಜನರನ್ನು ಕೊಂದು ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಅಮಚ್ಯನು ತನ್ನೊಂದಿಗೆ ಯುದ್ಧಕ್ಕೆ ಸೇರಿಸಿಕೊಳ್ಳದೆ ಇದ್ದದರಿಂದ ಆ ಸೈನಿಕರು ಕೋಪಗೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು, ಸಮಾರಿಯಾಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಜುದೇಯ ಪಟ್ಟಣಗಳ ಮೇಲೆ ದಾಳಿಮಾಡಿ, ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದಪಟ್ಟಣಗಳ ಮೇಲೆ ಬಿದ್ದು ಮೂರು ಸಾವಿರ ಜನರನ್ನು ಕೊಂದು ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತಮ್ಮ ಸಂಗಡ ಯುದ್ಧಕ್ಕೆ ಬಾರದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ದಾಳಿಮಾಡಿ, ಸಮಾರ್ಯ ಮೊದಲುಗೊಂಡು ಬೇತ್ ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಕೊಂದು, ಬಹು ಕೊಳ್ಳೆಯನ್ನು ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿ |