Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:14 - ಪರಿಶುದ್ದ ಬೈಬಲ್‌

14 ಎದೋಮ್ಯರನ್ನು ಸೋಲಿಸಿ ಅಮಚ್ಯನು ಮನೆಗೆ ಹಿಂದಿರುಗಿ ಬಂದನು. ಸೇಯೀರಿನ ಜನರು ಪೂಜಿಸುತ್ತಿದ್ದ ವಿಗ್ರಹಗಳನ್ನು ತನ್ನೊಂದಿಗೆ ತಂದನು. ಅವನು ಅವುಗಳನ್ನು ಪೂಜಿಸತೊಡಗಿ ಅಡ್ಡಬಿದ್ದು ಧೂಪ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ, ಅವುಗಳಿಗೆ ಅಡ್ಡಬಿದ್ದು ಧೂಪಾರತಿ ಎತ್ತುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ ತಾನು ತೆಗೆದುಕೊಂಡು ಬಂದಿದ್ದ ಸೇಯೀರನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ ಅವುಗಳಿಗೆ ಅಡ್ಡಬಿದ್ದು ಧೂಪಹಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:14
12 ತಿಳಿವುಗಳ ಹೋಲಿಕೆ  

ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.


“ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.


ಫಿಲಿಷ್ಟಿಯರು ತಮ್ಮ ದೇವರ ವಿಗ್ರಹಗಳನ್ನು ಬಾಳ್‌ಪೆರಾಚೀಮ್‌ನಲ್ಲಿಯೇ ಬಿಟ್ಟುಹೋದರು. ದಾವೀದನು ಮತ್ತು ಅವನ ಜನರು ಈ ವಿಗ್ರಹಗಳನ್ನು ತೆಗೆದುಕೊಂಡು ಹೋದರು.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ಅಮಚ್ಯನು ಮಾಡಿದರೂ ಹೃದಯ ಪೂರ್ವಕವಾಗಿ ಮಾಡಲಿಲ್ಲ.


ಅದೇ ಸಮಯದಲ್ಲಿ, ಇಸ್ರೇಲರ ಸೈನ್ಯವು ಯೆಹೂದದ ಕೆಲವು ಪಟ್ಟಣಗಳ ಮೇಲೆ ಧಾಳಿಮಾಡಿತು. ಅವರು ಬೇತ್ಹೋರೋನಿನಿಂದ ಹಿಡಿದು ಸಮಾರ್ಯದವರೆಗೆ ಇರುವ ಪಟ್ಟಣಗಳ ಮೇಲೆ ಧಾಳಿ ಮಾಡಿದರು. ಅವರು ಮೂರು ಸಾವಿರ ಜನರನ್ನು ಕೊಂದು ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಅಮಚ್ಯನು ತನ್ನೊಂದಿಗೆ ಯುದ್ಧಕ್ಕೆ ಸೇರಿಸಿಕೊಳ್ಳದೆ ಇದ್ದದರಿಂದ ಆ ಸೈನಿಕರು ಕೋಪಗೊಂಡಿದ್ದರು.


ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು.


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು