Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:15 - ಪರಿಶುದ್ದ ಬೈಬಲ್‌

15 ಯೆಹೋವನು ಅಮಚ್ಯನ ಮೇಲೆ ಸಿಟ್ಟುಗೊಂಡನು. ಅವನ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ಅಮಚ್ಯನೇ, ಆ ಜನರು ಪೂಜಿಸುವ ವಿಗ್ರಹಗಳಿಗೇಕೆ ನೀನು ಪೂಜೆ ಮಾಡುವೆ? ತಮ್ಮನ್ನು ಪೂಜಿಸುವವರನ್ನು ಆ ದೇವರುಗಳು ನಿನ್ನಿಂದ ಕಾಪಾಡಲಾರದೆ ಹೋದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ - ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಭಕ್ತಿಯನ್ನೇಕೆ ಇಟ್ಟಿದ್ದೀ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:15
23 ತಿಳಿವುಗಳ ಹೋಲಿಕೆ  

ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ. ನಮ್ಮ ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.


ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.


ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.


ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ.


ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.


ಆಗ ಎಲಿಯೇಜರನು ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಷ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶಮಾಡುವನು” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದುಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.


ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು.


ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು