Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:23 - ಪರಿಶುದ್ದ ಬೈಬಲ್‌

23 ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರ ಅರಸ ಯೋವಾಷನು, ಯೆಹೋವಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆಹಿಡಿದನು. ಅವನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ಗೋಡೆಯನ್ನು ಸುಮಾರು ಇನ್ನೂರು ಮೀಟರಿನಷ್ಟು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡು ಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:23
18 ತಿಳಿವುಗಳ ಹೋಲಿಕೆ  

ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.


ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ.


ಇದು ಯೆಹೋವನ ನುಡಿ: “ಯೆಹೋವನಿಗಾಗಿ ಜೆರುಸಲೇಮ್ ನಗರವನ್ನು ಮತ್ತೆ ಕಟ್ಟುವ ಕಾಲ ಬರುತ್ತಿದೆ. ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಇಡೀ ಪಟ್ಟಣವನ್ನು ಮತ್ತೊಮ್ಮೆ ಕಟ್ಟಲಾಗುವುದು.


ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.


ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.


ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದ್ದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವದೇನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’”


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾಮನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾಮನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾಮನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.


ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.


ಇಸ್ರೇಲ್ ಯೆಹೂದವನ್ನು ಸೋಲಿಸಿಬಿಟ್ಟಿತು. ಯೆಹೂದದ ಸೈನಿಕರೆಲ್ಲಾ ತಮ್ಮತಮ್ಮ ಮನೆಗಳಿಗೆ ಓಡಿಹೋದರು.


ನಂತರ ಹಿಜ್ಕೀಯನು ಜೆರುಸಲೇಮಿನ ಬಿದ್ದುಹೋಗಿದ್ದ ಕೋಟೆಗೋಡೆಗಳನ್ನು ಕಟ್ಟಿಸಿ ಭದ್ರಪಡಿಸಿದನು, ಪೌಳಿಗೋಡೆಯ ಮೇಲೆ ಬುರುಜು ಕಟ್ಟಿಸಿದನು. ಅಲ್ಲದೆ ಪೌಳಿಗೋಡೆಯ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿದನು. ಜೆರುಸಲೇಮಿನ ಹಳೇ ಭಾಗದ ಪೂರ್ವದ ಗೋಡೆಯನ್ನು ಭದ್ರಪಡಿಸಿದನು. ಅವನು ಅನೇಕ ಆಯುಧಗಳನ್ನು ಮತ್ತು ಗುರಾಣಿಗಳನ್ನು ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು