Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:24 - ಪರಿಶುದ್ದ ಬೈಬಲ್‌

24 ದೇವಾಲಯದೊಳಗೆ ಬೆಳ್ಳಿಬಂಗಾರಗಳು ಮತ್ತು ಬೆಲೆಯುಳ್ಳ ವಸ್ತುಗಳಿದ್ದವು. ಓಬೇದೆದೋಮನು ಅವುಗಳ ಮೇಲ್ವಿಚಾರಕನಾಗಿದ್ದನು. ಯೋವಾಷಾನು ಅವೆಲ್ಲವನ್ನೂ ಅರಮನೆಯಲ್ಲಿದ್ದ ನಿಕ್ಷೇಪವನ್ನೂ ಸೂರೆಮಾಡಿ ಕೆಲಜನರನ್ನು ಸೆರೆಹಿಡಿದು ಎಲ್ಲವನ್ನು ಸಮಾರ್ಯಕ್ಕೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು, ಪಾತ್ರೆಗಳನ್ನು, ಅರಸನ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ, ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನೂ ತೆಗೆದುಕೊಂಡು, ಹೊಣೆಗಾರರನ್ನಾಗಿ ಕೆಲವರನ್ನು ಸೆರೆಹಿಡಿದು ಸಮಾರಿಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲಾ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಅರಮನೆಯ ಭಂಡಾರಗಳಲ್ಲಿದ್ದದ್ದೆಲ್ಲವನ್ನೂ ತೆಗೆದುಕೊಂಡು ಹೊಣೆಗಾರರನ್ನಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಓಬೇದ್ ಏದೋಮನ ಬಳಿಯಲ್ಲಿ ಯೆಹೋವ ದೇವರ ಆಲಯದಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ, ಅರಮನೆಯ ಬೊಕ್ಕಸಗಳನ್ನೂ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:24
4 ತಿಳಿವುಗಳ ಹೋಲಿಕೆ  

ಓಬೇದೆದೋಮನಿಗೆ ದಕ್ಷಿಣದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನ ಮಕ್ಕಳಿಗೆ ಬೆಲೆಬಾಳುವ ಸಾಮಾಗ್ರಿಗಳ ಉಗ್ರಾಣದ ಕೋಣೆಯನ್ನು ಕಾಯುವ ಕೆಲಸ ದೊರೆಯಿತು.


ಶೀಶಕನು ಜೆರುಸಲೇಮಿನೊಳಗೆ ನುಗ್ಗಿ ದೇವಾಲಯದಲ್ಲಿಟ್ಟಿದ್ದ ಭಂಡಾರಗಳನ್ನೆಲ್ಲಾ ಸೂರೆಮಾಡಿದನು. ರಾಜನ ಅರಮನೆಯದಲ್ಲಿದ್ದ ವಸ್ತುಗಳನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ಸೂರೆಮಾಡಿ ತನ್ನ ದೇಶಕ್ಕೆ ಒಯ್ದನು.


ನಂತರ ಯೋವಾಷನು ದೇವಾಲಯದಲ್ಲಿದ್ದ ಮತ್ತು ಅರಮನೆಯ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು ಮತ್ತು ಪಾತ್ರೆಗಳನ್ನೆಲ್ಲ ತೆಗೆದುಕೊಂಡನು. ಇದಲ್ಲದೆ ಯೋವಾಷನು ಜನರನ್ನು ಸಹ ತನ್ನ ಸೆರೆಯಾಳುಗಳನ್ನಾಗಿ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು