Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:26 - ಪರಿಶುದ್ದ ಬೈಬಲ್‌

26 ಅಮಚ್ಯನ ಬೇರೆ ಕಾರ್ಯಗಳು ಅಂದರೆ ಆರಂಭದಿಂದ ಕೊನೆಯವರೆಗಿನ ಕಾರ್ಯಗಳನ್ನು ಯೆಹೂದದ ಮತ್ತು ಇಸ್ರೇಲಿನ ರಾಜರ ಗ್ರಂಥದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಉಳಿದ ಅವನ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಯೇಲರ ರಾಜರ ಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ಉಳಿದ ಪೂರ್ವೋತ್ತರಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜರ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಯೆಹೂದ ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:26
12 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.


ಇಸ್ರೇಲಿನ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತಮೇಲೆ ಅಮಚ್ಯನು ಹದಿನೈದು ವರ್ಷ ಜೀವಿಸಿದನು. ಅಮಚ್ಯನ ತಂದೆಯ ಹೆಸರು ಯೆಹೋವಾಷ; ಅವನು ಯೆಹೂದದ ಅರಸನಾಗಿದ್ದನು.


ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.


ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.


ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.


ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ.


ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು.


ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡಿಸಿದ ಯುದ್ಧಗಳ ವಿಷಯ ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.


ಹಿಜ್ಕೀಯನು ಮಾಡಿದ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನ ಗ್ರಂಥದಲ್ಲಿ ಬರೆದಿವೆ; ಯೆಹೂದ ಮತ್ತು ಇಸ್ರೇಲ್ ರಾಜರ ಚರಿತ್ರೆ ಪುಸ್ತಕದಲ್ಲೂ ಬರೆದಿರುತ್ತವೆ.


ಯೆಹೋಯಾಕೀಮನು ಮಾಡಿದ ದುಷ್ಕ್ರಿಯೆಗಳೆಲ್ಲಾ ಇಸ್ರೇಲಿನ ಮತ್ತು ಯೆಹೂದದ ರಾಜರುಗಳ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ಯೆಹೋಯಾಕೀಮನ ಬದಲು ಯೆಹೋಯಾಕೀನನು ಅರಸನಾದನು. ಇವನು ಯೆಹೋಯಾಕೀಮನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು