Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:9 - ಪರಿಶುದ್ದ ಬೈಬಲ್‌

9 ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನೆಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಮಚ್ಯನು ಆ ದೈವಪುರುಷನನ್ನು, “ಹಾಗಾದರೆ ನಾನು ಇಸ್ರಯೇಲ್ ಸೈನ್ಯಕ್ಕಾಗಿ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟುಬಿಟ್ಟೆನಲ್ಲಾ, ಏನು ಮಾಡುವುದು?,” ಎಂದು ಕೇಳಿದನು. ಅವನು, “ಸರ್ವೇಶ್ವರ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಕೊಡಬಲ್ಲರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಮಚ್ಯನು ದೇವರ ಮನುಷ್ಯನನ್ನು - ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ಮಾಡುವದೇನು ಎಂದು ಕೇಳಲು ಅವನು ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:9
4 ತಿಳಿವುಗಳ ಹೋಲಿಕೆ  

ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.


ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು