Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:11 - ಪರಿಶುದ್ದ ಬೈಬಲ್‌

11 ಉಜ್ಜೀಯನ ಬಳಿ ಒಳ್ಳೆಯ ತರಬೇತಿ ಹೊಂದಿದ ಸೈನ್ಯವಿತ್ತು. ಕಾರ್ಯದರ್ಶಿಯಾದ ಯೆಗೀಯೇಲ್ ಮತ್ತು ಅಧಿಕಾರಿಯಾದ ಮಾಸೇಯರು ಅವರನ್ನು ಗುಂಪುಗುಂಪಾಗಿ ವಿಂಗಡಿಸಿದರು. ಹನನ್ಯನು ರಾಜನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, ಯುದ್ಧಕ್ಕೆ ಬೇಕಾದ ಸೈನ್ಯವೂ ಉಜ್ಜೀಯನಿಗಿತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ, ಇವರು ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರ, ಅವನ ಪಟ್ಟಿಯನ್ನು ಬರೆದಿದ್ದರು. ಆಯಾ ಗುಂಪುಗಳು ಪಟ್ಟಿಯ ಕ್ರಮಾನುಸಾರ ಯುದ್ಧಕ್ಕೆ ಹೊರಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಅರಸನ ಸರದಾರರಲ್ಲೊಬ್ಬನಾದ ಹನನ್ಯನ ಆಜ್ಞಾನುಸಾರವಾಗಿ ಅವರ ಪಟ್ಟಿಯನ್ನು ಬರೆದಿದ್ದರು. ಆಯಾ ಗುಂಪುಗಳು ಪಟ್ಟಿಯ ಕ್ರಮಾನುಸಾರ ಯುದ್ಧಕ್ಕೆ ಹೊರಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಲೇಖಕನಾದ ಯೆಹೀಯೇಲನ ಕೈಯಿಂದಲೂ, ಅಧಿಪತಿಯಾದ ಮಾಸೇಯನ ಕೈಯಿಂದ ಬರೆದಿರುವ ಲೆಕ್ಕದ ಪ್ರಕಾರ, ಗುಂಪುಗುಂಪಾಗಿ ಯುದ್ಧಕ್ಕೆ ಹೋಗುವ ಯುದ್ಧವೀರರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:11
3 ತಿಳಿವುಗಳ ಹೋಲಿಕೆ  

ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು.


ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.


ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು