ಅಮಚ್ಯನು ಯೆಹೂದ ಪ್ರಾಂತ್ಯದ ಜನರನ್ನು ಒಟ್ಟುಗೂಡಿಸಿ ಅವರನ್ನು ಕುಟುಂಬಗಳಿಗನುಸಾರವಾಗಿ ವಿಭಾಗ ಮಾಡಿದನು. ಈ ಗುಂಪುಗಳಿಗೆ ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು. ಇವರು ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಗಳಲ್ಲಿ ಇಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರನ್ನು ಸೈನಿಕರನ್ನಾಗಿ ಆರಿಸಿದರು. ಒಟ್ಟು ಮೂರು ಲಕ್ಷ ಸೈನಿಕರು ಬರ್ಜಿ ಗುರಾಣಿಗಳೊಂದಿಗೆ ಯುದ್ಧ ಮಾಡಲು ನುರಿತರಾಗಿದ್ದರು.
ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.
ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.
ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು.
ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು.