Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:16 - ಪರಿಶುದ್ದ ಬೈಬಲ್‌

16 ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:16
24 ತಿಳಿವುಗಳ ಹೋಲಿಕೆ  

ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬ ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು. ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು.


ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”


‘ಇವೆಲ್ಲಾ ನಾವೇ ಸಂಪಾದಿಸಿದ್ದು, ನಮ್ಮ ಶಕ್ತಿಸಾಮರ್ಥ್ಯಗಳಿಂದ ಇವುಗಳನ್ನು ನಾವು ಪಡೆದೆವು’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿ.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.


ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.


ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.


ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೋ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು


ಕೋರಹ, ದಾತಾನ್, ಅಬೀರಾಮ್ ಮತ್ತು ಓನ್ ಎಂಬವರು ಮೋಶೆಗೆ ವಿರುದ್ಧವಾಗಿ ಎದ್ದರು. (ಕೋರಹನು ಇಚ್ಹಾರನ ಮಗನು, ಇಚ್ಹಾರನು ಕೆಹಾತನ ಮಗನು. ಕೆಹಾತನು ಲೇವಿಯ ಮಗನು. ದಾತಾನ್ ಮತ್ತು ಅಬೀರಾಮ್ ಇವರು ಎಲೀಯಾಬನ ಗಂಡುಮಕ್ಕಳು ಮತ್ತು ಓನನು ಪೆಲೆತನ ಮಗನು. ದಾತಾನ್, ಅಬೀರಾಮ್ ಮತ್ತು ಓನ್ ಇವರು ರೂಬೇನನ ಸಂತತಿಯವರು.)


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.


ಯೋತಾಮನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.


ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು.


ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”


ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.


ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.


ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು