Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:18 - ಪರಿಶುದ್ದ ಬೈಬಲ್‌

18 “ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನಿಗೆ - ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ದ್ರೋಹಿ. ಇದಕ್ಕಾಗಿ ದೇವರಾದ ಯೆಹೋವನಿಂದ ನಿನಗೆ ಮಾನವುಂಟಾಗಲಾರದು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:18
22 ತಿಳಿವುಗಳ ಹೋಲಿಕೆ  

ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.


ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು.


ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?


ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು