2 ಪೂರ್ವಕಾಲ ವೃತ್ತಾಂತ 26:19 - ಪರಿಶುದ್ದ ಬೈಬಲ್19 ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು . ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಧೂಪಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದಿದ್ದ ಉಜ್ಜೀಯನು ಕೋಪವುಳ್ಳವನಾದನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು ಯಾಜಕರೊಡನೆ ಸಿಟ್ಟಿನಿಂದ ಮಾತಾಡುತ್ತಿರುವಾಗ ಯಾಜಕರ ಸಮಕ್ಷದಲ್ಲೇ ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಉಜ್ಜೀಯನು ಕೋಪಿಸಿಕೊಂಡನು. ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಆದರೆ ಅವನು ಯಾಜಕರ ಮೇಲೆ ಕೋಪ ಮಾಡುತ್ತಿರುವಾಗಲೇ, ಯೆಹೋವ ದೇವರ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಬಂದಿತು. ಅಧ್ಯಾಯವನ್ನು ನೋಡಿ |