Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:2 - ಪರಿಶುದ್ದ ಬೈಬಲ್‌

2 ಉಜ್ಜೀಯನು ಏಲೋತ್ ಪಟ್ಟಣವನ್ನು ಮತ್ತೆ ಕಟ್ಟಿಸಿ ಯೆಹೂದ ರಾಜ್ಯಕ್ಕೆ ಸೇರಿಸಿದನು. ಅಮಚ್ಯನು ಸತ್ತಾಗ ಉಜ್ಜೀಯನು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ಸತ್ತು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲೋತ್ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲೋತ್ ಪಟ್ಟಣವನ್ನು ತಿರಿಗಿ ಯೆಹೂದರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನು ತನ್ನ ಪಿತೃಗಳ ಜೊತೆ ಸೇರಿದ ತರುವಾಯ, ಉಜ್ಜೀಯನು ಏಲೋತ್ ಪಟ್ಟಣವನ್ನು ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:2
7 ತಿಳಿವುಗಳ ಹೋಲಿಕೆ  

ಅವನ ಜನರು ಆ ಶವವನ್ನು ಕುದುರೆಯ ಬೆನ್ನಿನ ಮೇಲೆ ಹೊರಿಸಿ ತಂದು ಯೆಹೂದದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು.


ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.


ಆ ಬಳಿಕ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರದ ತೀರದಲ್ಲಿದ್ದ ಎಚ್ಯೋನ್ಗೆಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು.


ಆ ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ.


ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ನಂತರ ಅಜರ್ಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು.


ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ.


ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರ್ಷದವನಾಗಿದ್ದನು. ಅವನು ಐವತ್ತೆರಡು ವರ್ಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ಯ. ಆಕೆ ಜೆರುಸಲೇಮಿನವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು