2 ಪೂರ್ವಕಾಲ ವೃತ್ತಾಂತ 26:21 - ಪರಿಶುದ್ದ ಬೈಬಲ್21 ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾಮನು ಪ್ರಜಾಪಾಲನೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೋಗಿಯಾಗಿದ್ದು ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜ ಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿ |