Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:23 - ಪರಿಶುದ್ದ ಬೈಬಲ್‌

23 ಉಜ್ಜೀಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ ಶವವನ್ನು ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೀಯನ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಉಜ್ಜೀಯನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು, ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೋತಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಉಜ್ಜೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು ರಾಜಕುಟುಂಬಶ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:23
7 ತಿಳಿವುಗಳ ಹೋಲಿಕೆ  

ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.


ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಎಂಟು ವರ್ಷ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನು ಸತ್ತಾಗ ಅವನಿಗೋಸ್ಕರ ಯಾರೂ ದುಃಖಪಡಲಿಲ್ಲ. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ರಾಜರ ಸಮಾಧಿ ಸ್ಥಳದಲ್ಲಿ ಅವನನ್ನು ಹೂಳಿಡಲಿಲ್ಲ.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.


“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.


ಯೋತಾಮನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು