2 ಪೂರ್ವಕಾಲ ವೃತ್ತಾಂತ 26:5 - ಪರಿಶುದ್ದ ಬೈಬಲ್5 ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು. ಅಧ್ಯಾಯವನ್ನು ನೋಡಿ |
ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.