2 ಪೂರ್ವಕಾಲ ವೃತ್ತಾಂತ 26:7 - ಪರಿಶುದ್ದ ಬೈಬಲ್7 ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು. ಅಧ್ಯಾಯವನ್ನು ನೋಡಿ |
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.
ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.