2 ಪೂರ್ವಕಾಲ ವೃತ್ತಾಂತ 26:9 - ಪರಿಶುದ್ದ ಬೈಬಲ್9 ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆ ಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗ, ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿ ಭದ್ರಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಯೆರೂಸಲೇವಿುನಲ್ಲಿ ಮೂಲೆಬಾಗಲು, ತಗ್ಗಿನ ಬಾಗಲು, ಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.