Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 27:2 - ಪರಿಶುದ್ದ ಬೈಬಲ್‌

2 ಯೋತಾಮನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ [ಅವನಂತೆ] ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಅವನ ತಂದೆಯಂತೆ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಲಿಲ್ಲ. ಆಗ ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 27:2
8 ತಿಳಿವುಗಳ ಹೋಲಿಕೆ  

ಅವರೊಂದಿಗೆ ನಿಂತುಕೊಳ್ಳಲು ತಮಗೂ ಯೋಗ್ಯತೆ ಇದೆಯೆಂದು ಬೇರೆ ಯಾರಿಗೂ ಅನ್ನಿಸಲಿಲ್ಲ. ಜನರೆಲ್ಲರೂ ಅಪೊಸ್ತಲರ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳುತ್ತಿದ್ದರು.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ಉಜ್ಜೀಯನು ತನ್ನ ತಂದೆಯಾದ ಅಮಚ್ಯನಂತೆ ದೇವರ ಮುಂದೆ ಯೋಗ್ಯನಾಗಿ ನಡೆದುಕೊಂಡನು.


ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿದ್ದು ಹದಿನಾರು ವರ್ಷ ರಾಜ್ಯಭಾರ ಮಾಡಿದನು. ಆಹಾಜನು ತನ್ನ ಪೂರ್ವಿಕನಾದ ದಾವೀದನಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ದೇವರ ಚಿತ್ತದ ಪ್ರಕಾರ ಜೀವಿಸಲಿಲ್ಲ.


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು