Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 27:3 - ಪರಿಶುದ್ದ ಬೈಬಲ್‌

3 ಯೋತಾಮನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 27:3
6 ತಿಳಿವುಗಳ ಹೋಲಿಕೆ  

ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಯೆಹೋಯಾದನು ಸೇನಾಧಿಪತಿಗಳಿಗೂ ಅಧಿಪತಿಗಳಿಗೂ ಎಲ್ಲಾ ಜನರಿಗೂ ತನ್ನನ್ನು ಹಿಂಬಾಲಿಸುವಂತೆ ಹೇಳಿ, ಅರಸನನ್ನು ದೇವಾಲಯದೊಳಗಿಂದ ಹೊರತಂದನು. ಅವರೆಲ್ಲಾ ಮೇಲಿನ ಬಾಗಿಲಿನ ಮೂಲಕ ರಾಜನಿವಾಸಕ್ಕೆ ಹೋದರು. ಅಲ್ಲಿ ರಾಜನನ್ನು ಸಿಂಹಾಸನದಲ್ಲಿ ಕುಳ್ಳಿರಿಸಿದರು.


ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು. ಯೋತಾಮನು ಯೆಹೋವನ ಆಲಯಕ್ಕೆ ಮೇಲ್ಬಾಗಿಲನ್ನು ನಿರ್ಮಿಸಿದನು.


ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು